Wednesday, December 26, 2007

"ಅಜಾತ ಶತ್ರು" ಕೆಸಿಎನ್ ಚಂದ್ರಶೇಖರ್ ಅವರಿಗೆ ರಾಷ್ಟ್ರಮಟ್ಟದ ಮನ್ನಣೆ

(Courtesy:one India)
ಕನ್ನಡ ಚಿತ್ರೋದ್ಯಮದ "ಅಜಾತ ಶತ್ರು" ಕೆ.ಸಿ.ಎನ್ ಚಂದ್ರಶೇಖರ್ ಭಾರತೀಯ ಚಲನಚಿತ್ರ ಒಕ್ಕೂಟದ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಚಂದ್ರಶೇಖರ್ ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿ ಮತ್ತು ಭಾರತ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಕನ್ನಡ ಚಿತ್ರೋದ್ಯಮದಲ್ಲಿ ಹಲವಾರು ಚಿತ್ರಗಳನ್ನು ನಿರ್ಮಿಸಿರುವ ಚಂದ್ರಶೇಖರ್ ಭಾರತೀಯ ಚಲನಚಿತ್ರ ಒಕ್ಕೂಟಕ್ಕೆ ಇದೇ ಮೊದಲ ಬಾರಿಗೆ ಆಯ್ಕೆಯಾಗುತ್ತಿದ್ದಾರೆ. 500ಕ್ಕೂ ಹೆಚ್ಚು ಕನ್ನಡಚಿತ್ರಗಳ ವಿತರಕರಾಗಿ, 50ಕ್ಕೂ ಅಧಿಕ ಸದಭಿರುಚಿಯ ಕನ್ನಡ ಚಿತ್ರಗಳ ನಿರ್ಮಾಪಕರಾಗಿ ಕನ್ನಡ ಚಿತ್ರೋದ್ಯಮಕ್ಕೆ ತಮ್ಮದೇ ಆದಂತಹ ಸೇವೆ ಸಲ್ಲಿಸಿದ್ದ ಚಂದ್ರಶೇಖರ್ ಅವರನ್ನು ಭಾರತೀಯ ಚಲನಚಿತ್ರ ಒಕ್ಕೂಟಕ್ಕೆ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಿ ಆ ಮಟ್ಟಿಗಾದರೂ ಕನ್ನಡಿಗರಿಗೆ ರಾಷ್ಟ್ರ ಮಟ್ಟದಲ್ಲಿ ಸ್ಥಾನ ಕಲ್ಪಿಸುತ್ತಿರುವುದು ಸ್ವಾಗತಾರ್ಹ.

No comments: