Monday, May 5, 2008

ಸಿ.ವಿ.ಎಲ್.ಶಾಸ್ತ್ರಿಗೆ ದಾದಾಸಾಹೇಬ್ ಫಾಲ್ಕೆ ಗೌರವ

ಕನ್ನಡದ ಚಿತ್ರರಂಗದ ಹಿರಿಯ ನಿರ್ಮಾಪಕ ಸಿ.ವಿ.ಎಲ್.ಶಾಸ್ತ್ರಿ ಅವರಿಗೆ ದೇಶದ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಅಕಾಡೆಮಿ ವಾರ್ಷಿಕ ಪ್ರಶಸ್ತಿಯನ್ನು ಕೊಟ್ಟು ಸನ್ಮಾನಿಸಲಾಗಿದೆ. ಮುಂಬೈನಲ್ಲಿ ಗುರುವಾರ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಹಿಂದಿ ಚಿತ್ರರಂಗದ ಹಳೆ ನಟ ರಾಜೇಶ್ ಖನ್ನಾ ಪ್ರಶಸ್ತಿ ಪತ್ರ ಹಾಗೂ ಫಲಕವನ್ನು ಶಾಸ್ತ್ರಿ ಅವರಿಗೆ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ದಾದಾಸಾಹೇಬ್ ಫಾಲ್ಕೆ ಅಕಾಡೆಮಿಯ ಅಧ್ಯಕ್ಷರಾದ ಸಂತೋಷ್ ಸಿಂಗ್ ಜೈನ್ ಉಪಸ್ಥಿತರಿದ್ದರು.ಕರ್ನಾಟಕದಲ್ಲಿ ಟೂರಿಂಗ್ ಟಾಕೀಸ್ ಕ್ರಾಂತಿಗೆ ನೇತೃತ್ವ ವಹಿಸಿದ್ದ ಹಾಗೂ ಉದ್ಯಮಿ ಸಿ.ವಿ.ಎಲ್.ಶಾಸ್ತ್ರಿ ಸದಭಿರುಚಿಯ ಹಲವಾರು ಕನ್ನಡ ಚಿತ್ರಗಳನ್ನು ನಿರ್ಮಿಸಿದ್ದಾರೆ. ಸಾಹಸ ಸಿಂಹ ವಿಷ್ಣುವರ್ಧನ್ ನಟಿಸಿರುವ 'ಮಲಯ ಮಾರುತ', 'ಆಸೆಯ ಬಲೆ' ಮತ್ತು 'ಕಳ್ಳ ಕುಳ್ಳ' ಚಿತ್ರಗಳು ಶಾಸ್ತ್ರಿ ಅವರ ನಿರ್ಮಾಣದಲ್ಲಿ ಸಿದ್ಧವಾದ ಕನ್ನಡ ಸಿನೆಮಾಗಳು ಚಿತ್ರರಸಿಕರ ತನ್ಮನ ತಣಿಸಿವೆ.ಶಾಸ್ತ್ರಿ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರು ಆಗಿದ್ದರು. ಈ ಹಿಂದೆ ನಿರ್ಮಾಪಕಿ ಪಾರ್ವತಮ್ಮ ರಾಜ್‌ಕುಮಾರ್ ಹಾಗೂ ನಿರ್ಮಾಪಕ ಆರ್.ಲಕ್ಷ್ಮಣ್ ಅವರಿಗೆ ಇದೇ ರೀತಿಯ ಪ್ರಶಸ್ತಿಯ ಗೌರವಕ್ಕೆ ಪಾತ್ರರಾಗಿದ್ದಾರೆ.
(ಕರ್ಟೆಸಿ: ದಟ್ಸ್‌ಕನ್ನಡ)

No comments: